ಶಾಲೆಯಲ್ಲಿ ನೀಡುತ್ತಿರುವ ಬಿಸಿಯೂಟದ ಗುಣಮಟ್ಟ ಹದಗೆಟ್ಟಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ರಸ್ತೆಗಿಳಿದಿದ್ದಾರೆ. ಒಡಿಸ್ಸಾದ ಖುಂಟಾ ಸಮೀಪದ ಶಾಲೆಯೊಂದರ ಮಕ್ಕಳು ಗುರುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಬಾರೀಪದೆ ಕಡೆಗೆ ಓಡಲು ಶುರುಮಾಡಿದ್ದಾರೆ.
ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಗಳಲ್ಲಿ ಪದೇ ಪದೇ ಗೋಳಾಟ ತಪ್ಪುತ್ತಿಲ್ಲ. ಪಕ್ಕದ ಊರುಗಳಿಗೆ ಸುದ್ದಿ ಮುಟ್ಟುತ್ತಿದ್ದಂತೆ ಈ ದೃಶ್ಯ ಕಂಡುಬಂದಿದೆ. ಮಕ್ಕಳು ಊಟದ ಕಥೆ ಬಿಚ್ಚಿಟ್ಟಿದ್ದಾರೆ.
ಶಾಲೆಗಳಲ್ಲಿ ಸರಿಯಾದ ಸಮಯಕ್ಕೆ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಈಗ ಎದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆಲ್ಲಾ ಕಾರಣ.
ಮಕ್ಕಳು ಈ ರೀತಿ ದೌಡಾಯಿಸಿಕೊಂಡು ಬಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಂಬಂಧಪಟ್ಟ ಇಲಾಖೆಯವರು ತಕ್ಷಣವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಉಗ್ರರೂಪ ತಾಳುವ ಸಾಧ್ಯತೆಯಿದೆ.
written by www.afoxtv.com


















ಕಾಮೆಂಟ್ಗಳು